ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮೇ 16ರಂದು ದೇವರ ದಾಸಿಮಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 9.30 ಗಂಟೆಗೆ ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಬೆಳಗ್ಗೆ 11 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಎಂ.ಎಸ್.ಐ.ಎಲ್. ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್ ಉಪಸ್ಥಿತಿ ವಹಿಸುವರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ, ನಗರಸಭೆ ಉಪಾಧ್ಯಕ್ಷೆ ಮಮತಾ ಪಾಲ್ಗೊಳ್ಳುವರು. ಮೈಸೂರಿನ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ರಾಜ್ಯ ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯ ಬಿ. ಬಾಲಕೃಷ್ಣಯ್ಯ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.