ಮೇ 18 ರಂದು ನಗರದ ಜಿಲ್ಲಾ ಕಸಾಪ ಸಭಾಂಗಣದಲ್ಲಿ ಗೊರುಚ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ

223
Published on
ಹಾಸನ: ಅಖಿಲ ಭಾರತ ಶರಣಸಾಹಿತ್ಯ ಪರಿಷತ್ ಮೈಸೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಸನ ಇವರ ಸಹಯೋಗದಲ್ಲಿ ಮೇ 18 ರಂದು ನಗರದ ಜಿಲ್ಲಾ ಕಸಾಪ ಸಭಾಂಗಣದಲ್ಲಿ ಗೊರುಚ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾ ಸಭಾದ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ತಿಳಿಸಿದರು.
18ರಂದು ಬೆಳಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಾರನಹಳ್ಳಿ ಕೋಡಿಮಠದ ಶ್ರೀ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ವಹಿಸುವರು. ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ ಹಾಗೂ ನಾಡಿನ ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಸಿ.ಸೋಮಶೇಖರ ಅಧ್ಯಕ್ಷತೆ ವಹಿಸುವರು, ಹಾಸನ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ಅಭಿನಂದನಾ ನುಡಿಗಳನ್ನಾಡುವರು. ದತ್ತಿ ದಾಸೋಹಿಗಳಾದ ಗೊರುಚ ಅವರು ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಗಮಿಸುವರು ಎಂದರು.
ವಿಜಯಪುರ ಜಿಲ್ಲೆಯ ಡಾ.ಶಾಂತಾ ಇಮ್ರಾಪುರ ಅವರಿಗೆ ಶರಣ ಪ್ರಶಸ್ತಿ ಹಾಗೂ ಬೀದರ್ ಜಿಲ್ಲೆಯ ಪ್ರೊ.ಜಗನ್ನಾಥ ಹೆಬ್ಬಾಳೆ ಅವರಿಗೆ ಜಾನಪದ ಪ್ರಶಸ್ತಿ ನೀಡಲಾಗುವುದು. ಹಾಗೆಯೇ ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ ಡಾ.ಟಿ.ಆರ್.ಚಂದ್ರಶೇಖರ ಅವರ ಬಸವ ಪ್ರಣೀತ ಲಿಂಗಾಯತ ಧರ್ಮ ಮತ್ತು ಜನಪದ ಸಾಹಿತ್ಯ ಗ್ರಂಥ ಪ್ರಶಸ್ತಿ ಡಾ.ಮೊಗಳ್ಳಿ ಗಣೇಶ್ ಅವರ ದಲಿತ ಜನಪದ ಕೃತಿಗೆ ನೀಡಲು ನಿರ್ಧರಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿ.ಶ.ಸಾ.ಪರ ಅಧ್ಯಕ್ಷ ಕುಮಾರಸ್ವಾಮಿ, ಸುಶೀಲಾ ಸೋಮಶೇಖರ್, ತೀರ್ಥಕುಮಾರಿ,ಪುಟ್ಟರಾಜು, ರುದ್ರಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net