ಮೇ 23ರಂದು ತರಬೇತಿ ಕಾರ್ಯಗಾರ

Published on

ಚಾಮರಾಜನಗರ: ಬೆಂಗಳೂರಿನ ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟಿ.ಇ.ಸಿ.ಎಸ್.ಒ.ಕೆ) ಮತ್ತು ಚಾಮರಾಜನಗರ ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಂಎಸ್‌ಎಂಇ ಗಳಿಗೆ ಟ್ರೆಡ್ಸ್ ತರಬೇತಿ ಅರಿವು ಕಾರ್ಯಾಗಾರವನ್ನು ಮೇ 23ರಂದು ಬೆಳಗ್ಗೆ 10.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಆಸಕ್ತಿಯುಳ್ಳ ಜಿಲ್ಲೆಯ ಉದ್ಯಮಿದಾರರು ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ದೂ.ಸಂ. 08226-224916 ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net