ಮೇ 4ರಂದು ಹಾಸನದಲ್ಲಿ ಎಚ್.ಡಿ. ದೇವೇಗೌಡರ ಪ್ರಚಾರ

ಮೇ 4ರಂದು ಹಾಸನದಲ್ಲಿ ಎಚ್.ಡಿ. ದೇವೇಗೌಡರ ಪ್ರಚಾರ
Published on

ಹಾಸನ : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ಮೇ 4ರ ಗುರುವಾರದಂದು ಜಿಲ್ಲೆಯ ವಿವಿಧೆಡೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಗುರುವಾರ ಬೆಳಗ್ಗೆ 10.30ಕ್ಕೆ ಅರಸೀಕೆರೆ ತಾಲೂಕು ಗಂಡಸಿ ಮೈದಾನಕ್ಕೆ ದೇವೇಗೌಡರು ಆಗಮಿಸಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅಭ್ಯರ್ಥಿ ಎನ್.ಆರ್.ಸಂತೋಷ್ ಪರ ಮತಯಾಚನೆ ಮಾಡಲಿದ್ದಾರೆ.

ಬೆಳಗ್ಗೆ 11.30ಕ್ಕೆ ಬೇಲೂರು ತಾಲೂಕು ಇಬ್ಬೀಡಿನಲ್ಲಿ ಹಮ್ಮಿಕೊಂಡಿರುವ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ 1 ಗಂಟೆಗೆ ಸಕಲೇಶಪುರ ಪಟ್ಟಣದಲ್ಲಿ ಆಯೋಜಿಸಿರುವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅರಕಲಗೂಡಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿ ನಂತರ ಸಂಜೆ 4.15ಕ್ಕೆ ಹಾಸನ ನಗರಕ್ಕೆ ಆಗಮಿಸಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಗಮಿಸುತ್ತಿರುವ ಹಿನ್ನೆಲೆ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಜೆಡಿಎಸ್ ವಕ್ತಾರ ಹೊಂಗೆರೆ ರಘು ಮತ್ತು ಹಾಸನ ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net