ಮೇ ೫ ರಿಂದ ಒಳಮೀಸಲಾತಿ ಸಮೀಕ್ಷೆ

bkt-28-3
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಽಕಾರಿ ಜಾನಕಿ ಕೆ.ಎಂ ಮಾತನಾಡಿದರು. ಎಸ್ಪಿ ಅಮರನಾಥ ರೆಡ್ಡಿ, ಜಿ.ಪಂ ಸಿಇಒ ಶಶಿಧರ ಕುರೇರ ಇತರರು ಇದ್ದರು.
Published on

ಬಾಗಲಕೋಟೆ: ಒಳಮೀಸಲಾತಿ ಜಾರಿಗೆ ಸಂಬAಽಸಿದAತೆ ದತ್ತಾಂಶಗಳನ್ನು ಸಂಗ್ರಹಿಸಲು ಮೇ ೫ ರಿಂದ ೧೭ ವರೆಗೆ ಜಿಲ್ಲೆಯಾದ್ಯಂತ ಪರಿಶಿಷ್ಟ ಜಾತಿಯ ಜನರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದಿಂದ ನೇಮಕವಾಗಿರುವ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ ಅವರ ಏಕ ಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಯ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲಾಗಿದ್ದು, ನಿಗದಿತ ಅವಽಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ೩ ಜನ ಹಾಗೂ ಪ್ರತಿ ತಾಲೂಕಿಗೆ ೫ ರಂತೆ ಒಟ್ಟು ೫೦ ಜನ ಮಾಸ್ಟರ ಟ್ರೇನರಗಳನ್ನು ನೇಮಕ ಮಾಡಲಾಗಿದೆ. ಸದರಿ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನು ನೇಮಕ ಮಾಡಲು ಕ್ರಮ ವಹಿಸಲಾಗುತ್ತಿದೆ. ಗಣತಿದಾರರು ಮನೆ ಮನೆ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ. ೧೦ ರಿಂದ ೧೨ ಜನ ಗಣತಿದಾರರಿಗೆ ಒಬ್ಬರಂತೆ. ಮೇಲ್ವಿಚಾರಕ ಅಽಕಾರಿಯನ್ನು ನೇಮಿಸಲಾಗಿದೆ. ಈ ಗಣತಿ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಸಮೀಕ್ಷೆಯನ್ನು ಅಂಡ್ರಾಯ್ಡ್ ಮೊಬೈಲ್ ಮೂಲಕ ಆನ್‌ಲೈನ್‌ನಲ್ಲಿಯೇ ನಮೂದು ಮಾಡಲಾಗುತ್ತಿದೆ. ಆದ್ದರಿಂದ ಜವಾಬ್ದಾರಿಯಿಂದ ಸಮೀಕ್ಷೆ ಕಾರ್ಯ ನಡೆಸಬೇಕಿದೆ ಎಂದರು.

ತಾಲೂಕಾ ಮಟ್ಟದ ಮಾಸ್ಟರ ಟ್ರೇನರ್‌ಗಳಿಗೆ ತರಬೇತಿ ನೀಡಲಾಗುತ್ತಿದ್ದು, ಸಂಪೂರ್ಣ ತರಬೇತಿ ಹೊಂದಿ ಗಣತಿದಾರರಿಗೆ ತರಬೇತಿ ನೀಡಬೇಕು. ಏನೇ ಸಂದೇಹಗಳಿದ್ದರೂ ತರಬೇತಿಯಲ್ಲಿಯೇ ಬಗೆಹರಿಸಿಕೊಳ್ಳಬೇಕು. ಸಮೀಕ್ಷೆ ಕಾರ್ಯದಲ್ಲಿ ಮನೆ ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಜೊತೆ ಸೌಹಾರ್ದತೆಯಿಂದ ನಡೆದುಕೊಂಡು ಮಾಹಿತಿ ಪಡೆದುಕೊಳ್ಳಬೇಕು. ಒಳ ಮೀಸಲಾತಿಯ ದತ್ತಾಂಶದAತಹ ಮಹತ್ವದ ಜವಾಬ್ದಾರಿಯನ್ನು ನಿಮ್ಮ ಮೇಲೆ ಹಾಕಿದೆ. ತಾವು ಜವಾಬ್ದಾರಿಯಿಂದ ಸಮೀಕ್ಷೆ ಕಾರ್ಯದಲ್ಲಿ ಕೆಲಸ ಮಾಡಲು ತಿಳಿಸಿದರು.

ಗಣತಿದಾರರಿಂದ ಮನೆ ಮನೆ ಸಮೀಕ್ಷೆ ಮುಕ್ತಾಯಗೊಂಡ ನಂತರ ಗುರುತಿಸಿರುವ ಮತಗಟ್ಟೆ ಪ್ರದೇಶದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಪರಿಶಿಷ್ಟ ಜಾತಿಯ ಜನಾಂಗದವರು ವಿಶೇಷ ಶಿಬಿರಗಳಿಗೆ ತೆರಳಿ ಗಣತಿದಾರರಿಗೆ ಜಾತಿ ಕುರಿತು ಮೇ ೧೯ ರಿಂದ ೨೧ ವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಮನೆ ಮನೆ ಸಮೀಕ್ಷೆ ಹಾಗೂ ವಿಶೇಷ ಶಿಬಿರದಲ್ಲಿ ಜಾತಿಯ ಬಗ್ಗೆ ಘೋಷಣೆ ಮಾಡಿಕೊಳ್ಳದವರು ಆನ್‌ಲೈನ ಮೂಲಕ ಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಸ್ವಯಂ ಘೋಷೆಣೆಗೆ ಆಧಾರ ನಂಬರ ಹಾಗೂ ಆರ್‌ಡಿ ನಂಬರ ಕಡ್ಡಾಯವಾಗಿರುತ್ತದೆ. ಗಣತಿ ಸಮಯದಲ್ಲಿ ಗಣತಿದಾರರಿಗೆ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಽಕಾರಿಗಳು ಮನವಿ ಮಾಡಿಕೊಂಡರು.

ಜಿ.ಪA ಸಿಇಒ ಶಶಿಧರ ಕುರೇರ ಮಾತನಾಡಿ, ಜನಗಣತಿ ರೀತಿಯಲ್ಲಿ ಒಳಮೀಸಲಾತಿ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಂದು ಅಂಶದಲ್ಲಿ ಸ್ಪಷ್ಟತೆ ಇರಬೇಕು. ಪ್ರತಿಯೊಂದು ದತ್ತಾಂಶವನ್ನು ರ‍್ಯಾಂಡಮ್ ಆಗಿ ಪರೀಕ್ಷಿಸಬೇಕು. ಸಮೀಕ್ಷೆ ಕೈಗೊಳ್ಳುವ ಪೂರ್ವದಲ್ಲಿ ಮನೆ ಮನೆಗಳಿಗ ಮುಂಚಿತವಾಗಿ ಮಾಹಿತಿ ನೀಡಲು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ ಮಾತನಾಡಿ ಸಮೀಕ್ಷೆ ಕಾರ್ಯದಲ್ಲಿ ತೊಂದರೆಗಳು ಉಂಟಾದಲ್ಲಿ ೧೧೨ ಹಾಗೂ ಪೊಲೀಸ್ ಕಂಟ್ರೋಲ್ ರೂಮ್ ನಂ.೯೪೮೦೮೦೩೯೦೦ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಎ.ಆರ್.ಹಂಚಿನಾಳ, ಎಸ್.ಕೆ.ಕಲ್ಲೂರ, ಸ್ವಾಗತ ಗುಡಗಡೆ ಅವರು ಪಿಪಿಟಿ ಪ್ರದರ್ಶನದ ಮೂಲಕ ಸಮೀಕ್ಷೆ ನಡೆಸುವ ಬಗೆಯನ್ನು ವಿವರಿಸಿದರು. ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ಇತರೆ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net