ಮೇಲಾಟಗಳ ಕ್ರೀಡಾಕೂಟಗಳಿಗೆ ಕಾರಜೋಳ ಚಾಲನೆ

bkt-17-5
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇಲಾಟಗಳ ಕ್ರೀಡಾಕೂಟಗಳಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೋಮವಾರ ಚಾಲನೆ ನೀಡಿದರು.
Published on

ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಮೇಲಾಟ ಹಾಗೂ ಗುಂಪು ಆಟಗಳು ಮತ್ತು ವಿಶೇಷ ಚೇತನ ಮಕ್ಕಳ ಮೇಲಾಟಗಳ ಕ್ರೀಡಾಕೂಟಗಳಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೋಮವಾರ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕಾರಜೋಳ ಅವರು ಕೇಂದ್ರ ಮತ್ತು ರಾಜ್ಯ ಸರಕಾರ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ. ಅನುದಾನ ಸಹ ಹೆಚ್ಚಿಗೆ ನೀಡಲಾಗುತ್ತಿದೆ. ಕ್ರೀಡಾಪಟುಗಳು ಕ್ರೀಡಾ ಮನೋಭಾನೆ ಬೆಳೆಸಿಕೊಳ್ಳಲು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಗಳು ಮುಖ್ಯವಾಗಿವೆ. ವಿವಿಧ ರೀತಿಯ ಕ್ರೀಡೆಗಳ ಚಟುವಟಿಕೆಗಳು ನಮಗೆ ಬಹಳಷ್ಟು ಧನಾತ್ಮಕ ಅವಕಾಶಗಳನ್ನು ನೀಡಿತ್ತದೆ. ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಮಕ್ಕಳ ಶಾಲಾ ಸಾಧನೆಗಳು ಸಹ ಹೆಚ್ಚಳವಾಗುತ್ತದೆ. ಆಟವು ಮಕ್ಕಳ ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಲು ಮಾರ್ಗವಾಗಿ ಪರಿಣಮಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಗೂಡನವರ, ಕ್ಷೇತ್ರ ಶಿಕ್ಷಣಾಧಿಕಾರಿ ಸಾವಿತ್ರಿ ಕೊಂಡಗೋಳಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ವೈ.ಕಂದಗನೂರ, ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕ ಆರ್.ಆರ್.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಕ್ರೀಡಾ ಜ್ಯೋತಿಯನ್ನು ಸಚಿವರು ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net