ಮೇಲ್ಸೆತುವೆ ವಿಸ್ತರಣೆಗೆ ಕೇಂದ್ರ ತಾತ್ವಿಕ ಒಪ್ಪಿಗೆ : ಸಚಿವ ಜೋಶಿ

Published on

ಹುಬ್ಬಳ್ಳಿ; ನಗರದ ಪಿಬಿ ರಸ್ತೆಯ ಹಳೆ ಬಸ್ ನಿಲ್ದಾಣದಿಂದ ಬಿಡ್ನಾಳವರೆಗೆ ಮೇಲ್ಸೇತುವೆ ರಸ್ತೆ ನಿರ್ಮಿಸಿ, ಬೆಂಗಳೂರು ಮಾರ್ಗದಲ್ಲಿ ಸುಗಮ ಸಂಚಾರ ಕಲ್ಪಿಸಲು ೩೦೦ ಕೋಟಿ ರೂ. ಪ್ರಸ್ತಾವನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ನಗರದ ಸರ್ಕಿಟ್ ಹೌಸ್ ನಲ್ಲಿ ಶನಿವಾರ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಇದಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು ರಾಜ್ಯ ಸರ್ಕಾರ ೫೦ ಲಕ್ಷ ರೂ. ಬಿಡುಗಡೆ ಮಾಡಲು ಒಪ್ಪಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net