

ಚಿಕ್ಕಮಗಳೂರು: ತಾಲೂಕಿನ ಮೈಲಿಮನೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೃತಜ್ಞತಾ ಸಮಾಜ ಸೇವಾ ಸಂಘದ ವತಿಯಿಂದ ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ಶಶಾಂಕ್ ಹಾಗು ದ್ವಿತಿಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರಜ್ವಲ್ ಹಾಗು ಸಹನ ಅವರಿಗೆ ಪ್ರಶಸ್ತಿ ಫಲಕಗಳನ್ನು ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಜಯಚಂದ್ರ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪೂರ್ಣೇಶ್, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲೇಶ್, ಕೃತಜ್ಞತಾ ಸಮಾಜ ಸೇವಾ ಸಂಘದ ಅಧ್ಯಕ್ಷ ಮೋಹನ್, ಗ್ರಾಪಂ ಮಾಜಿ ಅಧ್ಯಕ್ಷ ರುದ್ರೇಗೌಡ ಮತ್ತಿತರರಿದ್ದರು.