ಮೈವಿವಿ ಪದವಿ ಪರೀಕ್ಷೆ ಮುಂದೂಡಿಕೆ

Published on

ಮೈಸೂರು: ಮೈಸೂರು ವಿಶ್ವವಿದ್ಯಾಲಯದಿಂದ ಫೆ.25ರಂದು ನಡೆಯಬೇಕಿದ್ದ ಎನ್‌ಇಪಿ ಮೊದಲೇ ಸೆಮಿಸ್ಟರ್ ಪದವಿ ಪರೀಕ್ಷೆಯನ್ನು ಮಾರ್ಚ್ 5ಕ್ಕೆ ಮುಂದೂಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗೆ ಫೆ.25 ಮತ್ತು 26ರಂದು ಸ್ಪರ್ಧಾತ್ಮಕ ಪರೀಕ್ಷೆ ಆಯೋಜಿಸಲಾಗಿದೆ. ಆದ್ದರಿಂದ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆ ಮುಂದೂಡುವಂತೆ ಆಯೋಗ ಕಳುಹಿಸಿದ ಪತ್ರದ ಆಧಾರದ ಮೇಲೆ ಮೈಸೂರು ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಲಾಗಿದೆ ಎಂದು ವಿವಿಯ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net