

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಸಂಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಯುವರಾಜ ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಎಚ್.ಸೋಮಶೇಖರಪ್ಪ ಗುರುವಾರ ಅಧಿಕಾರ ಸ್ವೀಕರಿಸಿದರು.
ಇವರನ್ನು ಮಾ.1ರಿಂದ ಅನ್ವಯವಾಗುವಂತೆ ನೇಮಕ ಮಾಡಿ ಮೈಸೂರು ಕುಲಸಚಿವೆ ವಿ.ಆರ್.ಶೈಲಜಾ ಆದೇಶ ಹೊರಡಿಸಿದ್ದರು. ಕಾಯಂ ಪ್ರಾಂಶುಪಾಲರನ್ನು ನೇಮಕಾತಿ ಮಾಡುವವರೆಗೆ ಅಥವಾ ಮುಂದಿನ ಆದೇಶದವರೆಗೂ ಇವರು ಕಾರ್ಯನಿರ್ವಹಣೆ ಮಾಡಲಿದ್ದಾರೆ.