ಮೈಸೂರಿಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

President Draupadi Murmu visited Mysore
Published on

ಮೈಸೂರು: ಮಧುಮಲೈ ಭೇಟಿ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.

ರಾಜ್ಯಪಾಲ ಥಾವತ್‌ಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮೇಯರ್ ಶಿವಕುಮಾರ್, ಪ್ರಾದೇಶಿಕ ಆಯುಕ್ತ ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ರಾಷ್ಟ್ರಪತಿ ಅವರನ್ನು ಬರ ಮಾಡಿಕೊಂಡರು.

ವಿಶೇಷ ವಿಮಾನದಲ್ಲಿ ನಗರಕ್ಕೆ ಆಗಮಿಸಿದ ಅವರು ನಂತರ ಸೇನಾ ಹೆಲಿಕಾಪ್ಟರ್‌ನಲ್ಲಿ ಮಧುಮಲೈಗೆ ತೆರಳಿದರು. ಮಧುಮಲೈ ಹುಲಿಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿ ತೆಪ್ಪಕಾಡು ಆನೆ ಶಿಬಿರದಲ್ಲಿ ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಮಂಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net