ಮೈಸೂರಿಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ನೀಡಿ : ಕರ್ನಾಟಕ ಸೇನಾ ಪಡೆ ಆಗ್ರಹ

Karunada senapade
Published on

ಮೈಸೂರು: ಬಜೆಟ್‌ನಲ್ಲಿ ಜಿಲ್ಲೆಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಘೋಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಜಿಲ್ಲೆಗೆ ವಿದ್ಯಾಭ್ಯಾಸ ಪಡೆಯಲು ದೇಶ, ವಿದೇಶದಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ ಆದರೆ, ನಗರದಲ್ಲಿ ಒಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಇಲ್ಲದೆ ಇರುವುದು ವಿಪರ್ಯಾಸ. ಎಲ್ಲ ಜಿಲ್ಲೆಗಳಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಇದ್ದು, ಅದೇ ರೀತಿ ಜಿಲ್ಲೆಯಲ್ಲೂ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಬೇಕು ಎಂದು ಒತ್ತಾಯಿಸಲಾಯಿತು.

ನಗರದಲ್ಲಿ ಕನ್ನಡ ನೆಲ, ಜಲ, ಭಾಷೆಗಳ ವಿಚಾರವಾಗಿ ಚರ್ಚೆ ಮಾಡಲು, ಸಮಾವೇಶ ನಡೆಸಲು ಸುಸಜ್ಜಿತ ಕನ್ನಡ ಭವನ ನಿರ್ಮಾಣ ಮಾಡಬೇಕು, ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು, ನಗರದಲ್ಲಿ ಟೆಕ್ ಪಾರ್ಕ್ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘಟನೆ ಪದಾಧಿಕಾರಿಗಳಾದ ತೇಜೇಶ್ ಲೋಕೇಶ್ ಗೌಡ, ಸಿ.ಎಚ್. ಕೃಷ್ಣಯ್ಯ, ಡಾ. ಶಾಂತರಾಜೇ ಅರಸ್, ಮೊಗಣ್ಣಾಚಾರ್, ಪ್ರಜೀಶ್, ಪ್ರಭುಶಂಕರ್, ವಿಜಯೇಂದ್ರ, ಅನಿಲ್, ಯೋಗೀಶ್ ಉಪ್ಪಾರ, ಮನುನಾಯಕ್, ಪ್ರಭಾಕರ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net