

ಮೈಸೂರು: ಕನಕಗಿರಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಮತದಾರರ ಬಳಿ ಮತಯಾಚನೆ ಮಾಡಿದರು. ಅಲ್ಲದೆ, ಕನಕಗಿರಿಯ ಅಂಗಡಿ ಮುಂಗಟ್ಟಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಮತದಾರರಿಗೆ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಉಪಯೋಗವಾಗುತ್ತಿವೆ. ಬಡವರ ಪರವಾಗಿ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ಕಾಂಗ್ರೆಸ್‌ಅನ್ನು ಬೆಂಬಲಿಸಬೇಕು ಎಂದು ಲಕ್ಷ್ಮಣ್ ಮನವ ಮಾಡಿದರು.
ಈ ಬಾರಿ ನನಗೆ ಒಂದು ಅವಕಾಶ ಕೊಡಿ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 5 ನ್ಯಾಯಗಳನ್ನು ಜನರಿಗೆ ನೀಡಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 5 ನ್ಯಾಯ ಹಾಗೂ 21 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು. ಈ ಸಂದರ್ಭ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಕಾಂಗ್ರೆಸ್ ಮುಖಂಡರಾದ ಸೋಮಶೇಖರ್, ಭವ್ಯ, ಬಿ.ಎಂ.ರಾಮು, ಗಿರೀಶ್, ವೆಂಕಟೇಶ್ ಹಾಗೂ ಇತರರು ಪಾಲ್ಗೊಂಡಿದ್ದರು.