ಮೈಸೂರಿನ ಜಯಪುರದಲ್ಲಿ ಚಿರತೆ ಸೆರೆ

leopard capctured
Published on

ಮೈಸೂರು: ತಾಲೂಕಿನ ಜಯಪುರ ಗ್ರಾಮದಲ್ಲಿ ಜನರ ನೆಮ್ಮದಿ ಕೆಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಮಂಗಳವಾರ ಮುಂಜಾನೆ ಸೆರೆಯಾಗಿದೆ.

ಎರಡು ದಿನಗಳ ಹಿಂದಷ್ಟೇ ಗ್ರಾಮದಲ್ಲಿ ಕುರಿಯೊಂದನ್ನು ಚಿರತೆ ಬಲಿ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಬೋನಿನಲ್ಲಿ ಒಂದೂವರೆ ವರ್ಷದ ಹೆಣ್ಣು ಚಿರತೆ ಬೆಳಗ್ಗೆ ಸೆರೆಯಾಗುವುದರೊಂದಿಗೆ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಗ್ರಾಮದಲ್ಲಿ ಚಿರತೆ ಕುರಿಯನ್ನು ಬಲಿ ಪಡೆದ ನಂತರ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿತ್ತು. ಜಮೀನಿಗೆ ಕೆಲಸ ಕಾರ್ಯಗಳಿಗೆ ಹೋಗಲು ರೈತಾಪಿ ವರ್ಗದವರು ಹಿಂದೇಟು ಹಾಕುತ್ತಿದ್ದರು. ಚಿರತೆ ಸೆರೆ ಸಿಕ್ಕ ನಂತರ ಜನರ ಆತಂಕ ದೂರವಾಗಿದೆ. ಸೆರೆಸಿಕ್ಕ ಚಿರತೆಯ ಆರೋಗ್ಯ ತಪಾಸಣೆ ನಡೆಸಿ ಅರಣ್ಯಕ್ಕೆ ಬಿಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net