ಮೈಸೂರಿನ ವಿವಿಧೆಡೆ ಜ.19 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

power
Published on

ಮೈಸೂರು: ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಜೆಎಸ್‌ಎಸ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜ.19 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನಾಡನಹಳ್ಳಿ, ಪ್ರಕೃತಿ ಬಡಾವಣೆ, ಜೆಎಸ್‌ಎಸ್ ಬಡಾವಣೆ 2ನೇ ಹಂತ, ಪೊಲೀಸ್ ಬಡಾವಣೆ, ಲಾಲ್ ಬಹದ್ದೂರ್‌ಶಾಸ್ತ್ರಿ ನಗರ, ಶಾಂತವೇರಿ ಗೋಪಾಲಗೌಡ ನಗರ, ಯಾಂದಹಳ್ಳಿ, ವಸಂತನಗರ, ಬನ್ನೂರು ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net