ಮೈಸೂರಿನಲ್ಲಿ 12ರಂದು ಲೋಕಾಯುಕ್ತರಿಂದ ದೂರು ಸ್ವೀಕಾರ

karnataka lokayukta
ಲೋಕಾಯುಕ್ತ ಕಚೇರಿ
Published on

ಮೈಸೂರು: ಲೋಕಾಯುಕ್ತ ಮೈಸೂರು ವಿಭಾಗ ಅಧಿಕಾರಿಗಳಿಂದ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಫೆ.12ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಮೈಸೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಅಗತ್ಯ ದಾಖಲಾತಿಗಳೊಡನೆ ಸಾರ್ವಜನಿಕರು ದೂರು ನೀಡಬಹುದು ಎಂದು ಲೋಕಾಯುಕ್ತದ ಪೊಲೀಸ್ ಅಧೀಕ್ಷಕ ಟಿ.ಜೆ.ಉದೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net