ಮೈಸೂರಿನಲ್ಲಿ 40 ಕೆ.ಜಿ. ಗಾಂಜಾ ವಶ, ಇಬ್ಬರ ಬಂಧನ

67o6bge8_ganja-generic-pixabay-650_625x300_04_August_18
Published on

ಮೈಸೂರು: ನಗರ ಅಪರಾಧ ಪತ್ತೆ ದಳ (ಸಿಸಿಬಿ) ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 40 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದದರು. ಈ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೇ ಸಂಗ್ರಹ ಮಾಡಿ ಇಟ್ಟಿದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net