

ಮೈಸೂರು: ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 894 ಜನರು ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 42,132 ಜನರು ಕರೊನಾದಿಂದ ಚೇತರಿಸಿಕೊಂಡಿದ್ದಾರೆ. 3,321 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ 220 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 46,392ಕ್ಕೆ ಏರಿಕೆಯಾಗಿದೆ. ಕೋವಿಡ್‌ಗೆ 3 ಜನ ಬಲಿಯಾಗಿದ್ದು, ಇದುವರೆಗೆ 939 ಜನ ಮೃತಪಟ್ಟಿದ್ದಾರೆ.