ಮೈಸೂರಿನಲ್ಲಿ ಅ.15 ರಂದು ‘ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ’ ಕಾರ್ಯಕ್ರಮ

Bagadi gautha
Published on

ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಹೋಬಳಿಯ ಬಂಕಹಳ್ಳಿ ಗ್ರಾಮದಲ್ಲಿ ಅ.15 ರಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ‘ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ’ ಗ್ರಾಮವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಹುಲ್ಲಹಳ್ಳಿ ಹೋಬಳಿಯ ಬಂಕಹಳ್ಳಿ ಗ್ರಾಮದ ಗ್ರಾಮಸ್ಥರು ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮುಂಚಿತವಾಗಿಯೇ ಸಂಬಂಧಪಟ್ಟ ನಾಡ ಕಚೇರಿ, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರಿಗೆ ತಮ್ಮ ಮನವಿಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಮಂಜುನಾಥ ಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮುರುಡಗಳ್ಳಿ ಗ್ರಾಮ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಹೋಬಳಿಯ ಚೆನ್ನಂಗೆರ ಗ್ರಾಮ, ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಹೋಬಳಿಯ ಉದ್ದೂರು ಗ್ರಾಮ, ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ನಾಗಾಪುರ ಹಾಡಿ-ಬ್ಲಾಕ್ ಗ್ರಾಮ, ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ಬೆಣಗಾಲು ಗ್ರಾಮ, ತಿ.ನರಸೀಪುರ ತಾಲೂಕಿನ ಸೋಸಲೆ ಹೋಬಳಿಯ ದೊಡ್ಡ ಬಾಗಿಲು ಹಾಗೂ ಸರಗೂರು ಹೋಬಳಿಯ ಸರಗೂರು ಶಂಕಹಳ್ಳಿ ಗ್ರಾಮದಲ್ಲಿ ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net