ಮೈಸೂರು: ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಡಿ.30 ರಂದು ಬೆಳಗ್ಗೆ 10.30ಕ್ಕೆ ನಗರದ ರಂಗಾಚಾರ್ಲು ಪುರಭವನದಲ್ಲಿ ಉದ್ಯೋಗ ಮೇಳ ಹಾಗೂ ನೇತ್ರ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ನ್ಯಾಯಾಧೀಶ ದೇವರಾಜಭೂತೆ ಉದ್ಘಾಟಿಸಲಿದ್ದಾರೆ ಎಂದು ಸಮಿತಿ ಪದಾಧಿಕಾರಿ ಆರ್.ಎಚ್. ರಾಜೇಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನೂರಾರು ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದು. ನೇತ್ರ ತಪಾಸಣೆಗೆ ನಡೆಯಲಿದ್ದು, ಅಗತ್ಯ ಇರುವವರಿಗೆ ಶಸ್ತ್ರಚಿಕಿತ್ಸೆಗೆ ಅವಕಾಶ ಇರುತ್ತದೆ ಎಂದು ಹೇಳಿದರು.
ಪದಾಧಿಕಾರಿಗಳಾದ ಸವಿತಾಶಾಸ್ತ್ರಿ, ಕಸ್ತೂರಿ ಚಂದ್ರು, ನಿರ್ಮಲಾ, ವಿನೋದ್, ಕಾರ್ತಿಕ್, ರವೀಂದ್ರ ಇದ್ದರು.