

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. 147 ಜನರಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಈವರೆಗೂ 47,831 ಜನರು ರೋಗಪೀಡಿತರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 197 ಜನರು ರೋಗಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇಲ್ಲಿಯ ತನಕ 45,290 ಜನರು ರೋಗದಿಂದ ಚೇತರಿಸಿಕೊಂಡಿದ್ದಾರೆ. ಇನ್ನು 1582 ಸೋಂಕಿತರು ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೆ ಒಬ್ಬರು ಕೋವಿಡ್‌ನಿಂದ ಮೃತಪಟ್ಟಿರುವುದು ಖಚಿತವಾಗಿದೆ. ಈವರೆಗೆ 959 ಜನರನ್ನು ಕರೊನಾ ಬಲಿ ಪಡೆದಿದೆ.