ಮೈಸೂರಿನಲ್ಲಿ ನಿಶಬ್ದ ವಲಯಗಳನ್ನಾಗಿ ಘೋಷಣೆ

262812-deepavali
Published on

ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ

.
ಮೈಸೂರಿನ ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು, ಅಸಹಾಯಕರು, ಅಸ್ವಸ್ಥರು ಹಾಗೂ ಪ್ರಾಣಿ ಪಕ್ಷಿಗಳ ಆರೋಗ್ಯ ಮತ್ತು ರಕ್ಷಣೆಯ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.


ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಂಬುಧಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನಗಳು, ಆಸ್ಪತ್ರೆ ಹಾಗೂ ನಸಿರ್ಂಗ್ ಹೋಮ್‌ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆ ಪ್ರದೇಶವನ್ನು 26 ರ ವರೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಶಬ್ದ ವಲಯ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಘೋಷಿಸಿರುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net