ಮೈಸೂರಿನಲ್ಲಿ ಪೇ ಆ್ಯಂಡ್ ಪಾರ್ಕ್‌ಗೆ ಜನಾಕ್ರೋಶ

CPIM Protest
Published on

ಮೈಸೂರು: ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ‘ಪೇ ಆ್ಯಂಡ್ ಪಾರ್ಕ್’ ಜಾರಿಗೊಳಿಸಲು ನಗರ ಪಾಲಿಕೆ ಕೈಗೊಂಡಿರುವ ತೀರ್ಮಾನ ವಿರೋಧಿಸಿ ಸಿಪಿಐ(ಎಂ) ಕಾರ್ಯಕರ್ತರು ಬುಧವಾರ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪೇ ಆ್ಯಂಡ್ ಪಾರ್ಕ್ ನಿಂದ ಜನರಿಗೆ ಹೊರೆಯಾಗಲಿದೆ. ನಗರಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಗ್ರಾಮೀಣ ಭಾಗದ ಜನರು ಆಗಮಿಸುತ್ತಾರೆ. ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಿದರೆ ಗುತ್ತಿಗೆ ಪಡೆದವರಿಗೆ ಹಣ ಸುಲಿಗೆ ಮಾಡಲು ದಾರಿ ಮಾಡಿಕೊಟ್ಟಂತೆ ಆಗುತ್ತದೆ.

ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡಲು ಸರಿಯಾದ ವ್ಯವಸ್ಥೆಯೇ ಇಲ್ಲ. ಪುರಭವನದ ಪಾರ್ಕಿಂಗ್ ಕಟ್ಟಡ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಮೊದಲು ಅವ್ಯವಸ್ಥೆಗಳನ್ನು ಸರಿಪಡಿಸಿ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಒತ್ತಾಯಿಸಲಾಯಿತು. ಪ್ರತಿಭಟನೆಯ ನಂತರ ನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net