ಮೈಸೂರಿನಲ್ಲಿ ಫೆ.24 ರಿಂದ 26ರವರೆಗೆ ಮಾಡರ್ನ್ ಖೋ ಖೋ ಪಂದ್ಯಾವಳಿ

6 Kho Kho Boys Final Match (1)
Published on

ಮೈಸೂರು: ಭಾರತೀಯ ಮಾಡರ್ನ್ ಖೋ ಖೋ ಒಕ್ಕೂಟ, ರಾಜ್ಯ ಮತ್ತು ಜಿಲ್ಲಾ ಮಾಡರ್ನ್ ಖೋ ಖೋ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಫೆ.24 ರಿಂದ 26 ರವರೆಗೆ ಕುವೆಂಪುನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ಮಾಡರ್ನ್ ಖೋ ಖೋ ರಾಷ್ಟ್ರೀಯ ಚಾಂಪಿಯನ್‌ಷಿಪ್ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ರಾಜ್ಯಾಧ್ಯಕ್ಷ ಎನ್. ಪ್ರಕಾಶ್ ತಿಳಿಸಿದರು.

ಪಂದ್ಯಾವಳಿಯಲ್ಲಿ ಕರ್ನಾಟಕ, ಕೇರಳ, ಪಾಂಡಿಚೇರಿ, ತಮಿಳುನಾಡು, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ, ರಾಜಸ್ತಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಘಡ, ಮಹಾರಾಷ್ಟ್ರ, ಗೋವಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಒಟ್ಟು 14 ತಂಡಗಳು ಪಾಲ್ಗೊಳ್ಳಲಿವೆ. ಸಾಂಪ್ರದಾಯಿಕ ಖೋ ಖೋಗಿಂತ ಮಾಡರ್ನ್ ಖೋ ಖೋ ಸ್ವಲ್ಪಮಟ್ಟಿಗೆ ಭಿನ್ನವಾಗಿದೆ. ಈ ಬಾರಿಯ ಚಾಂಪಿಯನ್‌ಷಿಪ್‌ನಲ್ಲಿ 200 ಆಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಸಿ.ಎಸ್. ಮಂಜುನಾಥ್, ಚಿನ್ನಮೂರ್ತಿ, ಮಹದೇವಪ್ಪ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net