ಮೈಸೂರಿನಲ್ಲಿ ಫೆ.4ಕ್ಕೆ ‘ಅನುಭವ ಮಂಟಪದ ಅನುಭಾವ ಗೋಷ್ಠಿ’ ದತ್ತಿ ಕಾರ್ಯಕ್ರಮ

Ma.Gu. Sadandaiah
Published on

ಮೈಸೂರು: ಶರಣ ಸಾಹಿತ್ಯ ಪರಿಷತ್ ನಗರ ಘಟಕ ವತಿಯಿಂದ ಫೆ.4 ರಂದು ಬೆಳಗ್ಗೆ 10ಕ್ಕೆ ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ಜವಜ್ಯೋತಿ ಸಭಾಂಗಣದಲ್ಲಿ ‘ಅನುಭವ ಮಂಟಪದ ಅನುಭಾವ ಗೋಷ್ಠಿ’ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ನಗರಾಧ್ಯಕ್ಷ ಮ.ಗು. ಸದಾನಂದಯ್ಯ ಹೇಳಿದರು.

ಅನುಭವ ಮಂಟಪ ಎಂಬ ಕಲ್ಪನೆಗೆ ಮತ್ತೆ ಜೀವ ತುಂಬಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ವಚನ ಸಾಹಿತ್ಯ, ವಚನಕಾರರು, ಅನುಭವ ಮಂಟಪದ ಮುಖ್ಯ ಪರಿಕಲ್ಪನೆ, ಭಾಷೆ, ಧರ್ಮ, ಸಮಾಜದ ಕುರಿತು ಕಾರ್ಯಕ್ರಮದಲ್ಲಿ ಪ್ರಶ್ನೋತ್ತರ ನಡೆಯಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮವನ್ನು ಕೆಪಿಟಿಸಿಎಲ್ ನಿವೃತ್ತ ಮುಖ್ಯ ಇಂಜಿನಿಯರ್ ಶಂಕರ್ ದೇವನೂರು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸಾಹಿತಿ ಪ್ರೊ.ಓ.ಎಲ್. ನಾಗಭೂಷಣಸ್ವಾಮಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಡಾ.ಕವಿತಾ ರೈ, ಸಹಾಯಕ ಪ್ರಾಧ್ಯಾಪಕಿ ಡಾ.ಜ್ಯೋತಿ ಶಂಕರ್, ಮೈಸೂರು ವಿಶ್ವ ವಿದ್ಯಾಲಯದ ತೆರಕಣಾಂಬಿ ಘಟಕ ಕಾಲೇಜಿನ ಅತಿಥಿ ಉಪನ್ಯಾಸಕ ದಿಲೀಪ್ ಕುಮಾರ್ ಪಾಲ್ಗೊಳ್ಳಲಿದ್ದು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಲೆಯೂರು ಗುರುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಪರಿಷತ್ ನಗರ ಕಾರ್ಯದರ್ಶಿ ಟಿ.ಎಸ್. ಕುಮಾರಸ್ವಾಮಿ, ಜೆಎಸ್‌ಎಸ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಎಚ್.ಬಿ. ಸುರೇಶ್, ದತ್ತಿ ದಾನಿ ಪ್ರೊ.ಡಿ.ಎಸ್. ಸದಾಶಿವಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net