ಮೈಸೂರಿನಲ್ಲಿ ಬಿಜೆಪಿ ಬೂತ್ ವಿಜಯಕ್ಕೆ ಸಚಿವ ಸೋಮಶೇಖರ್ ಚಾಲನೆ

bjp
Published on

ಮೈಸೂರು: ನರಸಿಂಹರಾಜ ಕ್ಷೇತ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಭವಿಷ್ಯ ನುಡಿದರು.

ಕ್ಯಾತಮಾರನಹಳ್ಳಿಯಲ್ಲಿ ಬುಧವಾರ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಬಾರಿ ಈ ಕ್ಷೇತ್ರದಿಂದ ನೂರಕ್ಕೆ ನೂರರಷ್ಟು ಬಿಜೆಪಿ ಶಾಸಕರು ಆಯ್ಕೆಯಾಗಲಿದ್ದಾರೆ. ಬಿಜೆಪಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಬೇಕು. ಇದಕೋಸ್ಕರ ಬೂತ್ ಮಟ್ಟದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷ ಭಾನುಪ್ರಕಾಶ್, ಮಾಜಿ ಶಾಸಕ ನಂಜುಂಡಸ್ವಾಮಿ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಮಾಜಿ ಮೇಯರ್ ಸಂದೇಶ್ ಸ್ವಾಮಿ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಬಿ.ಪಿ.ಮಂಜುನಾಥ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net