ಮೈಸೂರಿನಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ

DSC_7546
Published on

ಮೈಸೂರು: ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಕರೆ ನೀಡಿರುವ ಮುಷ್ಕರಕ್ಕೆ ನಗರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತಿ. ಸೋಮವಾರ ಮೈಸೂರಿನ ಬ್ಯಾಂಕ್ ನೌಕರರು ಕಾರ್ಯಚಟುವಟಿಕೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ನೀಡಿದರು.

ಟಿ.ಕೆ.ಬಡಾವಣೆಯ ಸಾಹುಕಾರ್ ಚೆನ್ನಯ್ಯ ರಸ್ತೆಯಲ್ಲಿರುವ ಎಸ್‌ಬಿಐ ವಲಯ ಕಚೇರ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಗೀಕರಣ ಮಾಡುಡುವ ಕ್ರಮಕ್ಕೆ ಕಡಿವಾಣ ಹಾಕಬೇಕು. ಬ್ಯಾಂಕುಗಳಲ್ಲಿ ದಿನಗೂಲಿ ನೌಕರರಾಗಿ ದಶಗಳಿಂದ ದುಡಿಯುತ್ತಿರುವವರನ್ನು ಖಾಯಂಗೊಳಿಸಬೇಕು. 11ನೇ ವೇತನ ಪರಿಷ್ಕರಣೆಯನ್ನು ಕೂಡಲೇ ಜಾರಿಗೆ ತರಬೇಕು. ಗ್ರಾಮೀಣ ಬ್ಯಾಂಕುಗಳಲ್ಲಿ ವ್ಯವಹಾರಕ್ಕೆ ತಕ್ಕಂತೆ ಮಾನವ ಸಂಪನ್ಮೂಲ ಹೆಚ್ಚಿಸಬೇಕು. ನಿವೃತ್ತ ನೌಕರರ ಪಿಂಚಣಿ ಪಾವತಿಯಲ್ಲಿ ಆದ ತಾರತಮ್ಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಸಂಚಾಲಕ ಎಚ್.ಬಾಲಕೃಷ್ಣ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net