ಮೈಸೂರಿನಲ್ಲಿ ಮನೆ ಬೀಗ ಮುರಿದು ಕಳ್ಳತನ

house-Theft
Published on

ಮೈಸೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮನೆಯ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ 6 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.

ಮೊದಲನೇ ಪ್ರಕರಣದಲ್ಲಿ ನಗರದ ವಿಜಯನಗರ ನಿವಾಸಿ ಪವಿತ್ರಾ ಎಂಬುವರ ಮನೆಗೆ ನುಗ್ಗಿದ ಕಳ್ಳರು, 2.8 ಲಕ್ಷ ರೂ. ಮೌಲ್ಯದ 56 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ರೂ. ಮೊತ್ತದ ಬೆಳ್ಳಿ ಪದಾರ್ಥಗಳನ್ನು ದೋಚಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2ನೇ ಪ್ರಕರಣದಲ್ಲಿ ತಾಲೂಕಿನ ಮಾಣಿಕ್ಯಪುರ ಗ್ರಾಮದಲ್ಲಿರುವ ಬಸವರಾಜು ಎಂಬವರ ಮನೆಯಲ್ಲಿ ಕಳ್ಳತನವಾಗಿದೆ.

ಮನೆಯ ಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಮನೆಯಲ್ಲಿ ಇದ್ದ 2.25 ಲಕ್ಷ ರೂ. ಮೌಲ್ಯದ 54 ಗ್ರಾಂ ಚಿನ್ನಾಭರಣ ಹಾಗೂ 45 ಸಾವಿರ ರೂ. ನಗದು ಕಳವು ಮಾಡಿದ್ದಾರೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net