

ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಸಿಗ್ನಲ್ ಬಳಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾತಗಳ್ಳಿ ನಿವಾಸಿ ಜೆ.ಪಿ.ಆನಂದ್ ರಾಜೀವ್ ಗಾಯಗೊಂಡವರು. ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುವ ಆನಂದ್ ರಾಜೀವ್ ಕೆಲಸಕ್ಕೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕೇರಳ ನೋಂದಣಿಯ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆಯಿತು. ನಂತರ ಕಾರು ನಿಯಂತ್ರಣಕ್ಕೆ ದೊರೆಯದೆ ರಸ್ತೆ ವಿಭಜಕದ ಮೇಲೆ ಹತ್ತಿ ಮರಕ್ಕೆ ಡಿಕ್ಕಿ ಹೊಡೆಯಿತು.
ತಕ್ಷಣ ಸ್ಥಳದಲ್ಲಿದ್ದ ಆಟೋರಿಕ್ಷಾ ಚಾಲಕರು ಧಾವಿಸಿ ಗಾಯಳು ಸ್ಕೂಟರ್ ಸವಾರನನ್ನು ಸಮೀಪದ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಕಾರು ಡಿಕ್ಕಿ ಹೊಡೆದ ಪರಿಣಾಮ ಕಾಲಿನ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ಬಲಗಾಲಿನ ಪಾದ ಸಂಪೂರ್ಣ ನಜ್ಜುಗುಜ್ಜಾಗಿದೆ. ಎನ್.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.