ಮೈಸೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಸಾಜ್ ಸ್ಪಾ ಮೇಲೆ ದಾಳಿ

Cyber Crime
Published on

ಮೈಸೂರು: ಸ್ಪಾ ಮತ್ತು ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಸಾಜ್ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಆರೋಪಿಗಳಿಂದ 10,000 ರೂ. ನಗದು ಹಾಗೂ ಮೊಬೈಲ್ ಫೋನ್‌ಗಳು ವಶ ಪಡಿಸಿಕೊಳ್ಳಲಾಗಿದೆ. ಸಿಸಿಬಿ ಪೋಲೀಸರಿಗೆ ದೊರೆತ ಖಚಿತ ವರ್ತಮಾನದ ಮೇರೆಗೆ ಡಿ.14 ರಂದು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾಜನ ಬಡಾವಣೆಯ ಅಭಿಷೇಕ್ ರಸ್ತೆಯ ವಾಟರ್ ಟ್ಯಾಂಕ್ ಬಳಿ ಇರುವ ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂತು. ಹಣದ ಆಮಿಷ ಒಡ್ಡಿ ಹೆಂಗಸರನ್ನು ಕರೆಸಿಕೊಂಡು ಮಸಾಜ್ ನೆಪದಲ್ಲಿ ಅವರನ್ನು ವೇಶ್ಯಾವಾಟಿಕೆ ದಂಧೆಗೆ ಬಳಸಲಾಗುತಿತ್ತು.

ಡಿಸಿಪಿ ಎಂ.ಎಸ್. ಗೀತಾ, ಸಿಸಿಬಿ ಘಟಕದ ಎಸಿಪಿ ಸಿ.ಕೆ. ಅಶ್ವತ್ಥನಾರಾಯಣ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಮಲ್ಲೇಶ್, ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ರವಿಶಂಕರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಪ್ರತಿಭಾ ಜಂಗವಾಡ, ಶಬರೀಶ್, ಸಿಬ್ಬಂದಿ ಕೆ.ಜಿ. ಶ್ರೀನಿವಾಸ್, ಮಮತಾ, ರವಿಕುಮಾರ್ ಮತ್ತು ರಘು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net