

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ದಸರಾ ಸಾಂಸ್ಕೃತಿಕ ಉಪಸಮಿತಿಯಿಂದ ಸೆ.22ರಿಂದ 30ರ ವರೆಗೆ ವಿವಿಧ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅರಮನೆ ಹಾಗೂ ಇತರ ವೇದಿಕೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಕಲಾವಿದರಿಂದ, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಾಮಂದಿರ, ವಿನೋಬಾ ರಸ್ತೆ, ಮೈಸೂರು-570005 ಇಲ್ಲಿಗೆ ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಕಲಾವಿದರಿಗೆ ಕಾರ್ಯಕ್ರಮ ಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಸಹಾಯಕ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.