ಮೈಸೂರು ರಂಗಾಯಣ: ರಂಗ ಕಲಾವಿದರಿಗೆ ಆಹ್ವಾನ

mysore
Published on

ಮೈಸೂರು: ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯನಾಟಕ ಶಾಲೆಯ ಪದವಿ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ, ಡಿಪ್ಲೋಮಾ, ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಸ್ನಾತಕ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ರಂಗಭೂಮಿ ಅನುಭವ ಅಪೇಕ್ಷಣೀಯ. ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಆಸಕ್ತರು ಅರ್ಜಿಯನ್ನು ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು-05 ಈ ವಿಳಾಸಕ್ಕೆ ಸೆಪ್ಟೆಂಬರ್ 1ರೊಳಗೆ ಸಲ್ಲಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net