ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಪ್ರತಿಭಟನೆ

4
Published on

ಮೈಸೂರು: ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ವಿವಿಯ ಕ್ರಾಫರ್ಡ್ ಭವನದ ಎದುರು ಸೇರಿದ ಪ್ರತಿಭಟನಾಕಾರರು ದಿನಸಿ, ತರಕಾರಿಗಳನ್ನು ಇಟ್ಟುಕೊಂಡು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಿವಿಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುತ್ತಿಲ್ಲ. ಅಡುಗೆಗೆ ಬಳಸುವ ದಿನಸಿ, ತರಕಾರಿ ಕಳಪೆಯಾಗಿದ್ದು, ತಿನ್ನಲು ಯೋಗ್ಯವಲ್ಲದ ಊಟ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕಷ್ಟಪಟ್ಟು ಆಹಾರ ಸೇವಿಸುವ ಪರಿಸ್ಥಿತಿ ಇದೆ ಎಂದು ಅಳಲು ತೋಡಿಕೊಂಡರು.
ಹಾಸ್ಟೆಲ್‌ನ ಊಟದ ವ್ಯವಸ್ಥೆ ಗುತ್ತಿಗೆ ಪಡೆದವರು ಗುಣಮಟ್ಟದ ಆಹಾರ ನೀಡದೆ ವಂಚಿಸುತ್ತಿದ್ದಾರೆ. ಹೀಗಾಗಿ ಕೂಡಲೇ ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದ ಕುಲಸಚಿವ ಡಾ.ಆರ್.ಶಿವಪ್ಪ, ಈ ಕುರಿತು ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು. ಸಂಘದ ಅಧ್ಯಕ್ಷ ಸೋಸಲೆ ಸಿದ್ದರಾಜು ಮತ್ತು ಇತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net