ಮೈಸೂರು ಶೈಕ್ಷಣಿಕ ಸ್ಥಾನದಲ್ಲಿ ಏರಿಕೆಯಾಗಬೇಕು: ಸಿಎಂ ಸೂಚನೆ

ಸಿದ್ದರಾಮಯ್ಯ siddaramaiah
ಮಾಜಿ ಸಿಎಂ ಸಿದ್ದರಾಮಯ್ಯ
Published on

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಿಂದಲೂ ಶೈಕ್ಷಣಿಕವಾಗಿ ಜಿಲ್ಲೆ ಮುಂದಿದ್ದರೂ, ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶದಲ್ಲಿ ತೀರಾ ಹಿಂದುಳಿದಿರುವುದು ತಲೆ ತಗ್ಗಿಸುವ ವಿಚಾರ. ಮುಂದಿನ ಸಾಲಿನಲ್ಲಿ ಐದರ ಒಳಗೆ ಸ್ಥಾನ ಪಡೆಯುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಶಿಕ್ಷಣ ಸೂಚ್ಯಂಕದಲ್ಲಿ ಜಿಲ್ಲೆ ಹಿಂದುಳಿದಿರುವುದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ, ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕು. ಶೂನ್ಯ ದಾಖಲಾತಿ ಶಾಲೆಗಳ ವ್ಯಾಪ್ತಿಯ ಪಾಲಕರ ಸಭೆ ನಡೆಸಬೇಕು. ಅವರ ಅಭಿಪ್ರಾಯ ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಬೇಕು. ಗುಣಮಟ್ಟದ ಶಿಕ್ಷಣ ಹೆಚ್ಚಿಸಲು ಶಿಕ್ಷಕರಿಗೆ ತರಬೇತಿ ನೀಡುವುದೂ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net