ಮೈಸೂರು ಹಂಗಾಮಿ ಕುಲಪತಿಯಾಗಿ ಪ್ರೊ. ಮುಜಾಫರ್ ಅಸ್ಸಾದಿ ನೇಮಕ

muzaffar assadi
Published on

ಮೈಸೂರು: ಮೈಸೂರು ವಿಶ್ವವಿದ್ಯಾಲಯ ನೂತನ ಹಂಗಾಮಿ ಕುಲಪತಿಯಾಗಿ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ. ಮುಜಾಫರ್ ಅಸ್ಸಾದಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

ಕುಲಪತಿ ಪ್ರೊ.ಜಿ. ಹೇಮಂತ ಕುಮಾರ್ ಅವರ ಅಧಿಕಾರಾವಧಿ 15-11-2022 ರಂದು ಮುಕ್ತಾಯಗೊಂಡ ನಂತರ ವಾಣಿಜ್ಯ ವಿಭಾಗದ ಡೀನ್ ಪ್ರೊ.ಎಚ್. ರಾಜಶೇಖರ್ ಅವರನ್ನು ನ.15 ರಂದು ಹಂಗಾಮಿ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರೊ. ಮುಜಾಫರ್ ಅಸ್ಸಾದಿ ಅವರನ್ನು ಫೆ.17 ರಿಂದ ಅನ್ವಯ ಆಗುವಂತೆ ಜೂ.30ರವರೆಗೆ ಹಂಗಾಮಿ ಕುಲಪತಿಯಾಗಿ ನೇಮಕ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net