

ಕಲಬುರಗಿ: ನಗರದ ಬಾಲಕಿಯರ ಸರ್ಕಾರಿ ಶಾಲೆಯಲ್ಲಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಶಾಸಕ ಅಲ್ಲಮಪ್ರಭು ಪಾಟೀಲ್ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ, ಬಾಳೆಹಣ್ಣು ಶುಕ್ರವಾರ ವಿತರಿಸಿದರು. ಮೇಯರ್ ವಿಶಾಲ ದರ್ಗಿ, ಜಿಪಂ ಸಿಇಒ ಭನ್ವರ್‌ಸಿಂಗ್ ಮೀನಾ, ಶಾಲಾ ಶಿಕ್ಷಣ ಇಲಾಖೆ ಅಪಾರ ಆಯುಕ್ತ ಡಾ.ಆಕಾಶ ಎಸ್., ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಇತರರಿದ್ದರು.