ಮೊಟ್ಟೆ ಹಗರಣ ತನಿಖೆಗೆ ಅಧಿಕಾರಿಗಳ ತಂಡ ರಚನೆ

Published on

ಕೊಳ್ಳೇಗಾಲ: ತಾಲೂಕಿನ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಮೊಟ್ಟೆ ಹಣವನ್ನು ನಿಯಮಬಾಹಿರವಾಗಿ ಅಂದಿನ ಸಿಡಿಪಿಒ ನಂಜಮಣಿ ಹಂಚಿಕೆ ಮಾಡಿರುವ ಆರೋಪದ ಕುರಿತು ತನಿಖೆಗೆ ಮೂವರು ಅಧಿಕಾರಿಗಳನ್ನೊಳಗೊಂಡ ತಂಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ರಚನೆ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆ ಸುಂದ್ರಮ್ಮ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಇವರ ಜತೆಗೆ ಸದಸ್ಯೆಯಾಗಿ ಮಂಡ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಹಾಗೂ ಸಹ ಕಾರ್ಯದರ್ಶಿಯಾಗಿ ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಯನ್ನು ನೇಮಕ ಮಾಡಿ ತನಿಖೆಗೆ ಆದೇಶ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net