ಮೊದಲ ದಿನ ೩ ನಾಮಪತ್ರ ಸಲ್ಲಿಕೆ

bkt-12-10
Published on

ಬಾಗಲಕೋಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೊದಲ ದಿನವಾದ ಶುಕ್ರವಾರದಂದು ಒಟ್ಟು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ರಾಜೇಸಾಬ ಬುರಾನಸಾಬ ಮಸಳಿ, ಅಂಬ್ರೋಸ್ ಡಿ, ಮೆಲ್ಲೋ ಹಾಗೂ ರವಿ ಶಿವಪ್ಪ ಪಡಸಾಲಿ ತಲಾ ಒಂದು ಸೇರಿ ಒಟ್ಟು ೩ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net