ಮೊದಲು ಕಾಲೇಜು ಆರಂಭಿಸಿ : ದೊರೆಸ್ವಾಮಿ

pes college doreswamy
Published on

ಬೆಂಗಳೂರು: ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಶಿಕ್ಷಣ ಸುಧಾರಣೆಗಳ ಸಲಹಾಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಉನ್ನತ ಶಿಕ್ಷಣ ಸಚಿವ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.

ಇಂದಿನ ಕರೊನಾ ಪರಿಸ್ಥಿತಿಯಲ್ಲಿ ಶಾಲೆಗಿಂತ ಮೊದಲಾಗಿ ಪದವಿ, ಸ್ನಾಕತೋತ್ತರ ಪದವಿ ಕಾಲೇಜು ಪ್ರಾರಂಭಿಸಬೇಕು. ಈ ವಿದ್ಯಾರ್ಥಿಗಳಿಗೆ ಸಾಮಾಜಿಕ ಅರಿವಿದೆ. ಅಲ್ಲದೆ, ರೋಗ ನಿರೋಧಕ ಶಕ್ತಿಯೂ ಹೆಚ್ಚಿರುತ್ತದೆ. 2ನೇ ಹಂತದಲ್ಲಿ ಪಿಯು ಮತ್ತು 3ನೇ ಹಂತದಲ್ಲಿ 6ನೇ ತರಗತಿಯಿಂದ ಕಾಲೇಜು ಆರಂಭಿಸಬೇಕು.

ದೂರ ಜಿಲ್ಲೆ, ರಾಜ್ಯಗಳಿಂದ ವಿದ್ಯಾರ್ಥಿಗಳು ಆಗಮಿಸಬೇಕಿರುವುದರಿಂದ ಸ್ಥಳೀಯರ ಆಗಮನಕ್ಕೆ ಅವಕಾಶ ನೀಡಬೇಕು. ವಿದ್ಯಾರ್ಥಿಗಳನ್ನು ಎರಡು ತಂಡಗಳಾಗಿ ವಿಂಗಡಿಸಿ ದಿನ ಬಿಟ್ಟು ದಿನ ತರಗತಿ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆಗೆ ವಿದ್ಯಾಸಂಸ್ಥೆಗಳು ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಆ ಮೂಲಕ ಶಾಲಾ-ಕಾಲೇಜುಗಳು ಸ್ೇ ಎಂಬುದನ್ನು ಪಾಲಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಪತ್ರದಲ್ಲಿ ದೊರೆಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net