ಮೊಬೈಲ್ ಕ್ಯಾಂಟೀನ್ ಆರಂಭಕ್ಕೆ ಸಹಾಯಧನ

mobile-van-advertising
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಪ್ರವಾಸೋದ್ಯಮ ಇಲಾಖೆಯಿಂದ 2024- 25ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ ಕುರಿತು 1 ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಘಟಕ ವೆಚ್ಚದ ಶೇ. 70ರಷ್ಟು ಅಥವಾ ಗರಿಷ್ಠ 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜ. 31ರೊಳಗೆ ರಂಗಾಯಣ ಆವರಣದಲ್ಲಿಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net