

ಬೆಳಗಾವಿ: ಇಂದಿನ ಆಧುನಿಕ ಯುಗದಲ್ಲಿ ವಿದ್ಯಾಥಿಗಳ ಅತಿಯಾದ ಮೊಬೈಲ್ ಬಳಕೆಯಿಂದ ದೇಶಿ ಕ್ರೀಡೆಗಳಾದ ಕಬಡ್ಡಿ, ವಾಲಿಬಾಲ್, ಖೋಖೋ ಸೇರಿದಂತೆ ಅನೇಕ ಕ್ರೀಡೆಗಳು ಕಣ್ಮರೆಯಾಗುತ್ತಿವೆ ಎಂದು ವಿಟಿಯು ದೈಹಿಕ ಶಿಣದ ನಿರ್ದೇಶಕ ಡಾ.ಪಿ.ವಿ.ಕಡಗದಕಾಯಿ ಹೇಳಿದರು.
ನಗರದ ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಘಾಟನಾ ಸಮಾರಂಭದ ಅಧ್ಯತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಚೇರ್ಮನ್ ಎಫ್.ವಿ.ಮಾನ್ವಿ ಮಾತನಾಡಿದರು. ಪ್ರಾಚಾರ್ಯ ಡಾ.ಬಿ.ಆರ್.ಪಟಗುಂದಿ, ಪ್ರಾಧ್ಯಾಪಕ ಹಾಗೂ ಕ್ರೀಡಾ ಸಂಯೋಜಕ ಆನಂದ ಬಂಕದ, ದೈಹಿಕ ನಿರ್ದೇಶಕ ವಿ.ಎಸ್.ಅರಳಿಮಟ್ಟಿ, ಶ್ರೀಧರ ನೇಮಗೌಡ ಇತರರಿದ್ದರು.