ಮೊಬೈಲ್ ಮೂಲಕವೂ ಕರ ಪಾವತಿಸಿ

CTD 17 NGARASABE (1)--0003
Published on

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‌ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‌ಗಳಾದ ಭೀಮ್, ಭಾರತ್ ಬಿಲ್‌ಪೇ, ಫೋನ್‌ಪೇ, ಪೆಟಿಎಂ, ಗೂಗಲ್ ಪೇ ಗಳ ಮುಖಾಂತರ ಕರ ಪಾವತಿಸಬಹುದು. ಖಜಾನೆ-2 ತಂತ್ರಾಂಶದಲ್ಲಿ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್, ಕೆನರಾಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಗಳು ಹಾಗೂ ನಗರಸಭೆ ಕಚೇರಿಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಕೌಂಟರ್‌ನಲ್ಲೂ ತೆರಿಗೆ ಪಾವತಿಸಬಹುದಾಗಿದೆ ಎಂದು ನಗರಸಭೆ ಆಯುಕ್ತೆ ಎಂ.ರೇಣುಕಾ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net