ಮೊಬೈಲ್‍ನಿಂದ ಮಕ್ಕಳ ದೂರವಿರಿಸಿ

Jeeja Maata School Photo-2
Published on

ಬೀದರ್: ಪಾಲಕರು ಮಕ್ಕಳನ್ನು ಮೊಬೈಲ್‍ನಿಂದ ದೂರ ಇರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಲೀಂ ಪಾಷ ಹೇಳಿದರು.
ಇಲ್ಲಿಯ ಜೀಜಾಮಾತಾ ಶಿಕ್ಷಣ ಕೇಂದ್ರದಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜ ಜಯಂತಿ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಮೊಬೈಲ್ ಕಾರಣ ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಮಕ್ಕಳು ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು. ನಿತ್ಯ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಈ ಮೂಲಕ ಉತ್ತಮ ಫಲಿತಾಂಶ ಗಳಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಮಾತನಾಡಿ, ವಿದ್ಯಾರ್ಥಿಗಳು ಸಾಧಿಸಿ ತೋರುವ ಛಲ ಬೆಳೆಸಿಕೊಳ್ಳಬೇಕು. ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.
ಶಿವ ಛತ್ರಪತಿ ಸ್ಮಾರಕ ಸಮಿತಿಯ ಕಾರ್ಯದರ್ಶಿ ಸತೀಶ ಮೂಳೆ ಮಾತನಾಡಿ, ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಮಿತಿಯು ವಿವಿಧ, ಶಾಲಾ ಕಾಲೇಜುಗಳನ್ನು ಆರಂಭಿಸಿದೆ ಎಂದು ತಿಳಿಸಿದರು.
ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ ಮಾತನಾಡಿ, ಜೀಜಾಮಾತಾ ಶಿಕ್ಷಣ ಕೇಂದ್ರದಲ್ಲಿ ಕನ್ನಡ, ಮರಾಠಿ ಮಾಧ್ಯಮದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ನಡೆಯುತ್ತಿವೆ. 500 ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅತ್ಯಂತ ಕಡಿಮೆ ಶುಲ್ಕ ಇರುವ ಕಾರಣ ಕೇಂದ್ರ ಬಡ ವಿದ್ಯಾರ್ಥಿಗಳಿಗೆ ವರವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಸಭಿಕರ ಗಮನ ಸೆಳೆದವು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಬುರಾವ್ ಕಾರಬಾರಿ, ಮಾಜಿ ಸದಸ್ಯ ದಿಗಂಬರರಾವ್ ಪಾಟೀಲ ಚಾಂದೋರಿ, ಮೀರಾ ಮುಳೆ, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಬೆಳಮಗಿ, ತಾಲ್ಲೂಕು ಪಂಚಾಯಿತಿಯ ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕಿ ಗೀತಾ ಗಡ್ಡಿ, ಜಿಲ್ಲಾ ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ ಪಾಟೀಲ ಯರನಳ್ಳಿ, ಕರ್ನಾಟಕ ಮರಾಠಾ ಸೇವಾ ಸಂಘದ ಮಾಜಿ ಕಾರ್ಯದರ್ಶಿ ವಿದ್ಯಾವಾನ ಪಾಟೀಲ, ಶಿಕ್ಷಕರಾದ ರಾಜಕುಮಾರ ಗಾದಗೆ, ಸಂಜಯ ಪಾಟೀಲ, ಅನಿಲಕುಮಾರ ಟೇಕೋಳೆ, ಬಸವರಾಜ ಡಿ.ಆರ್, ಭೀಮಶಾ ಈರಣ್ಣ, ವಿವೇಕರಾವ್, ಲತಾ, ಸರೋಜನಿ, ನಾಗರತ್ನ, ಉಷಾ ಪಾಟೀಲ, ಆರತಿ ಬಲ್ಲೂರ, ಗಾಯತ್ರಿ ಇದ್ದರು.
ಶಿಕ್ಷಕ ತಾನಾಜಿ ನಿರಗುಡೆ ನಿರೂಪಿಸಿದರು. ಮೋಹನ್ ಜೋಶಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net