

ಚಿತ್ರದುರ್ಗ:ರಾಜ್ಯಸರ್ಕಾರದ ವಿರುದ್ಧ ಟೀಕೆ ಮಾಡಲು ವಿಚಾರಗಳು ಇಲ್ಲದೆ ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ,ರಾಜ್ಯ ಸರ್ಕಾರ ಜಾತಿ ಗಣತಿ ಮಾಡುತ್ತಿಲ್ಲ,ಬದಲಿಗೆ ಆರ್ಥಿಕ,ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿರುವುದಾಗಿ ಹಿಂದುಗಳನ್ನು ಒಡೆಯುವ ಕೆಲಸಕ್ಕೆ ರಾ ಜ್ಯಸರ್ಕಾರ ಮುಂದಾಗಿದೆ ಎಂಬ ಬಿಜೆಪಿ ಟೀಕೆಗೆ ತಿರುಗೇಟು ನೀಡಿದರು. ಕೇಂದ್ರ ಜಾತಿ ಗಣತಿ ಮಾಡುವುದಾಗಿ ಘೋಷಿಸಿದೆ ಎಂಬುದ ನ್ನು ಬಿಜೆಪಿ ನೆನಪು ಮಾಡಿಕೊಳ್ಳ ಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಒದಗಿಸುವುದು ನಮ್ಮ ಈ ಸಮೀಕ್ಷೆ ಉದ್ದೇಶವೆಂದರು.
---