ಮೊಸಳೆ ಹೊಸಳ್ಳಿ ಸಮೀಪ ರೈಲ್ವೆ ಹಳಿ ಮೇಲೆ ಯುವಕನ ಶವ

ಮೊಸಳೆ ಹೊಸಳ್ಳಿ ಸಮೀಪ ರೈಲ್ವೆ ಹಳಿ ಮೇಲೆ ಯುವಕನ ಶವ
Published on

ಹಾಸನ: ತಾಲೂಕಿನ ಮೊಸಳೆ ಹೊಸಳ್ಳಿ ಸಮೀಪ ರೈಲ್ವೆ ಹಳಿ ಮೇಲೆ ಸೋಮವಾರ ಯುವಕನ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.

ಮೃತ ಯುವಕನನ್ನು ಕೈಗಾರಿಕಾ ಪ್ರದೇಶಾಭಿವೃದ್ಧಿ ಪ್ರದೇಶದ ನಿವಾಸಿ ಅಮಿತ್ (24) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಅಮಿತ್ ರಜೆ ಹಿನ್ನಲೆಯಲ್ಲಿ ಊರಿಗೆ ಬಂದಿದ್ದ. ಸೋಮವಾರ ಬೆಳಿಗ್ಗೆ ರೈಲ್ವೆ ಹಳಿ ಮೇಲೆ ಶವ ಬಿದ್ದಿರುವುದನ್ನು ಕಂಡು ಸಾರ್ವಜನಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದ ಅಲ್ಲಲ್ಲಿ ಗಾಯದ ಗುರುತುಗಳಿವೆ. ರೈಲ್ವೆ ಹರಿದಿದ್ದರೆ ದೇಹ ಛಿದ್ರವಾಗಿರುತ್ತಿತ್ತು. ಯಾರೋ ಮೊದಲೇ ಕೊಲೆಗೈದು ಹಳಿ ಮೇಲೆ ಶವ ಎಸೆದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net