ಮೋಂಬತ್ತಿ ಹಿಡಿದು ಮೌನ ಪ್ರತಿಭಟನೆ

Oplus_131072
Oplus_131072
Published on

ನಂಜನಗೂಡು: ಜಮ್ಮು ಮತ್ತು ಕಾಶ್ಮೀರದ ಪಹಾಲ್ಗಮ್ ಪ್ರದೇಶಕ್ಕೆ ತೆರಳಿದ್ದ ಪ್ರವಾಸಿಗರಿಗೆ ಧರ್ಮದ ಹೆಸರು ಕೇಳಿ, ಕುಟುಂಬಸ್ಥರ ಕಣ್ಣ ಮುಂದೆ ಗುಂಡಿಕ್ಕಿ ಕೊಂದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕಾಂಪೋಸ್ಟ್ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ಆಕ್ರೋಶ ವ್ಯಕ್ತಪಡಿಸಿದರು.

ನಂಜನಗೂಡು ವಿಧಾನಸಭಾ ಕ್ಷೇತ್ರದ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಕ್ಷದ ನೂರಾರು ಕಾರ್ಯಕರ್ತರು ಬುಧವಾರ ರಾತ್ರಿ ನಗರದ ಚಿಂತಾಮಣಿ ಗಣಪತಿ ದೇವಾಲಯದಿಂದ ವಿಶ್ವೇಶ್ವರಯ್ಯ ವೃತ್ತದವರೆಗೆ ಮೋಂಬತ್ತಿ ಬತ್ತಿ ಹಿಡಿದು ಮೌನ ಪ್ರತಿಭಟನೆ ನಡೆಸಿದರು.

ನಂತರ ವಿಶ್ವೇಶ್ವರಯ್ಯ ವೃತ್ತದಲ್ಲಿ ಮಾತನಾಡಿದ ಅವರು, ಭಾರತದ ಮಿನಿ ಸ್ವಿರ್ಡ್ಜಲೆಂಡ್ ಎಂದೇ ಪ್ರಖ್ಯಾತಿ ಪಡೆದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ರಜಾ ದಿನಗಳನ್ನು ಕಳೆಯಲು ಹೋಗಿದ್ದ ಹಲವು ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ಖಂಡಿಸುತ್ತೇವೆ. ಮೃತಪಟ್ಟಿರುವ ಎಲ್ಲರಿಗೂ ತಾಲೂಕು ಬಿಜೆಪಿ ವತಿಯಿಂದ ಸಾಂತ್ವನ ಹೇಳುತ್ತೇವೆ ಎಂದರು.

ಪ್ರವಾಸಿಗರನ್ನು ಹತ್ಯೆ ಮಾಡಿರುವುದು ಸರಿಯಿಲ್ಲ. ಮುಖ್ಯವಾಗಿ ಹಿಂದುಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದು ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಇದನ್ನು ತಾಲೂಕು ಬಿಜೆಪಿ ಘಟಕ ಖಂಡಿಸುತ್ತದೆ ಎಂದರು.

ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ, ಮಹಾದೇವ ಪ್ರಸಾದ್, ಯುವ ಮೋರ್ಚಾ ಅಧ್ಯಕ್ಷರಾದ ಸಿದ್ದರಾಜು, ಮನೋಜ್, ಹಿರಿಯ ಮುಖಂಡರಾದ ಕೃಷ್ಣಪ್ಪ, ಚಿಕ್ಕರಂಗನಾಯಕ, ಗೋಪಿ, ಸಚಿನ್, ಶ್ರೇಯಸ್ಸು, ಬಾಲಚಂದ್ರು, ಮಹೇಶ್ ಅತಿಖಾನೆ, ಮಧುರಾಜ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net