ಮೋದಿ ಕೆಳಗಿಳಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಅಪಾಯ

Ravivarmakumar
Published on

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ತಪ್ಪಿದ್ದಲ್ಲ ಎಂದು ವಕೀಲ ಪ್ರೊ.ರವಿವರ್ಮ ಕುಮಾರ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ 2025ರ ಆರ್‌ಎಸ್‌ಎಸ್ ಶತಮಾನೋತ್ಸವದ ವೇಳೆಗೆ ಸಂವಿಧಾನ ಬದಲಿಸಿದರೂ ಅಚ್ಚರಿ ಇಲ್ಲ. ಏಕೆಂದರೆ ಅಂಬೇಡ್ಕರ್ ವಿರೋಧಿ ಪಕ್ಷವದು ಎಂದರು.

ದೇಶದಲ್ಲೇ ಅತ್ಯಂತ ಭ್ರಷ್ಟ ಪಕ್ಷ ಬಿಜೆಪಿ ಬಿಟ್ಟರೆ ಮತ್ತೊಂದಿಲ್ಲ. ಭ್ರಷ್ಟರಾಗಿದ್ದರೂ ವಿರೋಧಿಗಳು ಬಿಜೆಪಿ ಸೇರ್ಪಡೆಯಾದರೆ ಶುಭ್ರರಾಗಿಸಿ, ಕ್ಲೀನ್ ಚೀಟ್ ನೀಡುತ್ತಾರೆ. ಇಲ್ಲದಿದ್ದರೆ, ಟಾರ್ಗೆಟ್ ಮಾಡುತ್ತಾರೆ ಎಂದು ಟೀಕಿಸಿದರು.

ನಿವೃತ್ತ ಡಿಸಿ ಭಕ್ತರಾಮೇಗೌಡ, ನಿವೃತ್ತ ಐಎಎಸ್ ಅಧಿಕಾರಿ ಕೆ.ಅರ್ಥೆಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net