ಮೋದಿ ದೇಶದ ಬಲಿಷ್ಠ ಪ್ರಧಾನಿ-ಶಾಸಕ ಬಾಲಚಂದ್ರ ಜಾರಕಿಹೊಳಿ

BLJ-5
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ಪಟ್ಟಣದ ಆಂಜನೇಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅರಭಾವಿ ಮಂಡಲ ಬಿಜೆಪಿಯಿಂದ ಜರುಗಿದ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿದರು. ಸಂಸದೆ ಮಂಗಲಾ ಅಂಗಡಿ, ಮಾಜಿ ಶಾಸಕ ಸಂಜಯ ಪಾಟೀಲ ಹಾಗೂ ಅನೇಕರು ಇರಿದ್ದರು.
Published on

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಇಡೀ ಪ್ರಪಂಚವೇ ನಮ್ಮ ಭಾರತದತ್ತ ನೋಡುತ್ತಿದೆ. ಪ್ರಧಾನಿ ಮೋದಿ ಅವರ ಜನಪ್ರೀಯ ಯೋಜನೆಗಳನ್ನು ಜನತೆ ಮನೆ ಬಾಗಿಲಿಗೆ ತಲುಪಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಮೋದಿ ಅವರಿಗೆ ಶಕ್ತಿ ತುಂಬುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಮನವಿ ಮಾಡಿದರು.
ಶನಿವಾರ ಸಂಜೆ ತಾಲೂಕಿನ ಅರಭಾವಿ ಪಟ್ಟಣದ ಆಂಜನೇಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಂದಿನ ಎಪ್ರೀಲ್-ಮೇ ತಿಂಗಳಲ್ಲಿ ಜರುಗುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಮೋದಿಯವರನ್ನು ಆಶೀರ್ವದಿಸಬೇಕು.
ಕಳೆದ 9 ವರ್ಷಗಳಿಂದ ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿಯಾಗಿ ಅತ್ಯುತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಮೋದಿ ಅವರಿಗಿಂತ ಮುಂಚೆ ಅಧಿಕಾರದಲ್ಲಿದ್ದ ಕಾಂಗ್ರೇಸ್ ಪಕ್ಷ ಯಾವ ರೀತಿಯಾಗಿ ಅಧಿಕಾರ ನಡೆಸಿತು ಎಂಬುದು ಎಲ್ಲರಿಗೂ ಮನವರಿಕೆಯಾಗಿದೆ. ಭಾರತ ಬಲಿಷ್ಠ ರಾಷ್ಟ್ರವಾಗಬೇಕಾದರೆ ನರೇಂದ್ರ ಮೋದಿ ಅವರಂತಹ ದೇಶಪ್ರೇಮಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಮೋದಿ ಅವರಿಂದಲೇ ನಮ್ಮ ಹೆಮ್ಮೆಯ ಭಾರತಕ್ಕೆ ಪ್ರಪಂಚದ ಭೂ ಪಟದಲ್ಲಿ ವಿಶೇಷ ಸ್ಥಾನವಿದೆ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಎರಡೂ ಸ್ಥಾನಗಳನ್ನು ಗೆಲ್ಲಲು ಜಿಲ್ಲೆಯ ಎಲ್ಲ ನಾಯಕರು ತಮ್ಮ ಒಗ್ಗಟ್ಟಿನ ಮಂತ್ರ ಜಪಿಸುವ ಮೂಲಕ ಪಕ್ಷಕ್ಕೆ ಬಲ ತುಂಬೋಣ. ದೇಶದ ಪ್ರತಿ ಹಳ್ಳಿ ಹಳ್ಳಿಗಳಿಂದ ಮಣ್ಣನ್ನು ಸಂಗ್ರಹಿಸಿ ದೆಹಲಿಯ ವೀರ ಯೋಧರ ಉದ್ಯಾನವನಕ್ಕೆ ಬಳಸಲಾಗುತ್ತಿದೆ. ಇದು ಪ್ರಧಾನಿಗಳ ಮಹತ್ವಾಕಾಂಕ್ಷೆಯ ಅಭಿಯಾನವಾಗಿದ್ದು, ಈ ಅಭಿಯಾನಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಸಲಹೆ ನೀಡಿದರು.ಸಂಸತ್ ಸದಸ್ಯೆ ಮಂಗಲಾ ಅಂಗಡಿ ಮಾತನಾಡಿ, ನಮ್ಮ ದೇಶದ ಭವ್ಯ ಪರಂಪರೆ, ಇತಿಹಾಸ ಹಾಗೂ ಅಖಂಡ ಭಾರತ ನಿರ್ಮಾಣಕ್ಕೆ ಪ್ರಧಾನಿಗಳು ಹಗಲಿರುಳು ದುಡಿಯುತ್ತಿದ್ದಾರೆ ಎಂದರು.ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರುಣ ಶಹಾಪುರ ಮಾತನಾಡಿ, ದೇಶದ ಪ್ರತಿ ಮನೆ ಮನೆಯ ಮಣ್ಣನ್ನು ಸಂಗ್ರಹ ಮಾಡಲಾಗುತ್ತಿದೆ. ಭಾರತವನ್ನು ತುಕಡೆ-ತುಕಡೆ ಕರ್ ದೇಂಗೆ ಎನ್ನುವವರಿಗೆ ಈ ಅಭಿಯಾನ ಅಂತವರಿಗೆ ತಕ್ಕ ಪಾಠ ಕಲಿಸಲಿದೆ ಎಂದರು. ಜಿಲ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಇಂದು ರಾಷ್ಟ್ರ ರಾಜಧಾನಿಯಲ್ಲಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ-20 ಶೃಂಗ ಸಭೆ ನಡೆದಿರುವುದು ಅವರ ನಾಯಕತ್ವಕ್ಕೆ ಹಿಡಿದ ಸಾಕ್ಷಿಯಾಗಿದೆ ಎಂದರು. ಬಾಲಚಂದ್ರ ಜಾರಕಿಹೊಳಿ ಕೇವಲ ಅರಭಾವಿ ಹುಲಿ ಅಲ್ಲ. ಅವರು ಬೆಳಗಾವಿ ಜಿಲ್ಲೆಯ ಹುಲಿ ಎಂದ ಅವರು, ಬಾಲಚಂದ್ರ ಜಾರಕಿಹೊಳಿ ಅವರ ಬಲದಿಂದ ಲೋಕಸಭಾ ಚುನಾವಣೆಯನ್ನು ಎದುರಿಸಲಾಗುವುದು ಎಂದರು. ವೇದಿಕೆಯಲ್ಲಿ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ, ಬೆಳಗಾವಿ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು. ಮಹಾಂತೇಶ ಕುಡಚಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ಮನೆ ಮನೆಗಳಿಂದ ಮಣ್ಣನ್ನು ಸಂಗ್ರಹಿಸಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅರಭಾವಿ ಪಟ್ಟಣದ ಮುಖಂಡರು, ಪಕ್ಷದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net