ಮೋದಿ ಸಹೋದರ ಕುಟುಂಬ ಆಸ್ಪತ್ರೆಯಿಂದ ಬಿಡುಗಡೆ

Published on

ಮೈಸೂರು: ಅಪಘಾತದಲ್ಲಿ ಗಾಯಗೊಂಡು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ ಮೋದಿ ಹಾಗೂ ಕುಟುಂಬ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿತು.
ಮೋದಿ ಅವರ ತಾಯಿಯ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದಿಢೀರ್ ಅಹಮದಾಬಾದ್‌ಗೆ ತೆರಳಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಬೀಳ್ಕೊಟ್ಟರು.
ನಮ್ಮ ತಾಯಿಯ ಆರೋಗ್ಯ ಸ್ಥಿರವಾಗಿದೆ. ಅವರು ಒಂದೆರಡು ದಿನಗಳಲ್ಲಿ ಸಂಪೂರ್ಣವಾಗಿ ಸುಧಾರಿಸಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ಈಗ ತೆರಳಿ ತಾಯಿಯ ಆರೋಗ್ಯ ವಿಚಾರಿಸುತ್ತೇನೆ. ಪ್ರಧಾನಿ ನರೇಂದ್ರಮೋದಿ ಈಗಾಗಲೇ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ ಎಂದು ಪ್ರಹ್ಲಾದ್ ದಾಮೋದರ ಮೋದಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
ಕುಟಂಬದವರು ಆರೋಗ್ಯವಾಗಿದ್ದು, ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಉತ್ತಮವಾಗಿ ನೋಡಿಕೊಂಡರು. ನಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಅವರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net