ಮೋದಿಯಿಂದ ಭಾರತಕ್ಕೆ ಶ್ರೇಷ್ಠ ಗೌರವ

bkt-17-2
ಬಾಗಲಕೋಟೆ ನಗರದ ಹೋಳೆ ಆಂಜನೇಯ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಮಂಗಳವಾರ ಹಮ್ಮಿಕೊಂಡ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ನಿಮಿತ್ತ ವಿಶೇಷ ಪೂಜೆ ಸಲ್ಲಿಸಲಾಯಿತು
Published on

ಬಾಗಲಕೋಟೆ: ಪ್ರಧಾನಿ ಮೋದಿಯಿಂದಾಗಿ ವಿಶ್ವದ ಎದುರು ಭಾರತಕ್ಕೆ ಶ್ರೇಷ್ಠ ಗೌರವ ಸಿಕ್ಕಿದೆ. ಎಲ್ಲರ ಜೊತೆ ಎಲ್ಲರ ವಿಕಾಸದ ಧ್ಯೇಯದೊಂದಿಗೆ, ಕಾಯಕ ತಪಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ನಗರದ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಮಂಗಳವಾರ ಹಮ್ಮಿಕೊಂಡ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ನಿಮಿತ್ತ ವಿಶೇಷ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು.

ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೆ ಮೆಚ್ಚುವಂತೆ ಅಭಿವೃದ್ಧಿ ಕಾರ್ಯಗಳ ಜೊತೆಗೆ ದೇಶದ ಆಡಳಿತವನ್ನು ನಿರ್ವಹಿಸುತ್ತಿದ್ದಾರೆ, ನವ ಭಾರತ ನಿರ್ಮಾಣಕ್ಕೆ ದೃಢ ಸಂಕಲ್ಪ ತೊಟ್ಟಿರುವ ಮೋದಿಜಿಯವರ ಕೈಯನ್ನು ಎಲ್ಲರೂ ಇನ್ನಷ್ಟೂ ಬಲಪಡಿಸೋಣ, ಮೋದಿಯವರ ಜನಪರ ಯೋಜನೆಗಳನ್ನು ಜನಸಾಮನ್ಯರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್,ಪಾಟೀಲ. ಡಾ.ಎಂ.ಎಸ್.ದಡ್ಡೆನ್ನವರ, ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಗುಂಡುರಾವ ಶಿಂಧೆ,ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ,ಉಪಾಧ್ಯಕ್ಷೆ ಶೋಭಾ ರಾವ್, ಜ್ಯೋತಿ ಭಜಂತ್ರಿ, ಶಿವಲೀಲಾ ಪಟ್ಟಣಶೆಟ್ಟಿ, ಅನಿತಾ ಸರೋಧೆ, ಬಸವರಾಜ ಹುನಗುಂದ, ಸತ್ಯನಾರಾಯಣ ಹೆಮಾದ್ರಿ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ, ಶ್ರೀಕಾಂತ ಪತ್ತಾರ, ಕುಮಾರ ಯಳ್ಳಿಗುತ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net